ಅವರು 2024ರ ಜೂನ್ 5ರಂದು ಬೋಯಿಂಗ್‌ನ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಉಡಾವಣೆಗೊಂಡು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್) ತಲುಪಿದ್ದರು. ಆದರೆ ತಾಂತ್ರಿಕ ಸಮಸ್ಯೆಗಳ ಕಾರಣದಿಂದ, ನೌಕೆ ಗಗನಯಾತ್ರಿಗಳಿಲ್ಲದೆ ಭೂಮಿಗೆ ಮರಳಿತು. ಈ ಸಮಸ್ಯೆಯ ಕಾರಣದಿಂದ ಸುನಿತಾ ವಿಲಿಯಮ್ಸ್ ಮತ್ತು ಅವರ ಸಹಯಾತ್ರಿಗಳು ಐಎಸ್‌ಎಸ್‌ನಲ್ಲಿ 9 ತಿಂಗಳು ಉಳಿಯಬೇಕಾಯಿತು.
ಇದೀಗ, ಸ್ಪೇಸ್‌ಎಕ್ಸ್‌ನ ಕ್ರೂ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಅವರನ್ನು ಕರೆತರಲು ಯಶಸ್ವಿಯಾಗಿ ಐಎಸ್‌ಎಸ್‌ಗೆ ತಲುಪಿದ್ದು, ಸುನಿತಾ ವಿಲಿಯಮ್ಸ್ ಹಾಗೂ ಅವರ ತಂಡ ಭೂಮಿಗೆ ಮರಳಲು ಸಿದ್ಧರಾಗಿದ್ದಾರೆ.
0 Comments